Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್‌, ಜಿಲ್ಲಾ ಹಾಲು ಒಕ್ಕೂಟಗಳಿಂದ ಸಿಎಂಗೆ ಧನ್ಯವಾದ

By ANU News
November 3, 2026 1 Min Read
Comments Off on ಹಾಲಿನ ದರ ಹೆಚ್ಚಳಕ್ಕೆ ಕೆಎಂಎಫ್‌, ಜಿಲ್ಲಾ ಹಾಲು ಒಕ್ಕೂಟಗಳಿಂದ ಸಿಎಂಗೆ ಧನ್ಯವಾದ

ಬೆಂಗಳೂರು: ಹಾಲಿನ ದರ ಹೆಚ್ಚಳದ ನಿರ್ಧಾರಕ್ಕೆ ಕೃತಜ್ಞತೆ ಸಲ್ಲಿಸಲು ಕೆಎಂಎಫ್‌ ಹಾಗೂ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದರು.

ರಾಜ್ಯ ಸರ್ಕಾರದ ನಿರ್ಧಾರದಿಂದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಲೀಟರ್ ಹಾಲಿನ ಖರೀದಿ ದರದಲ್ಲಿ ರೈತರಿಗೆ ₹7 ಹೆಚ್ಚಳ ಮಾಡಲಾಗಿದೆ. ಗ್ರಾಹಕರಿಗೆ ಅನ್ವಯಿಸುವ ಎಂಆರ್‌ಪಿ ದರದಲ್ಲಿಯೂ ಪ್ರತಿ ಲೀಟರ್‌ಗೆ ₹8 ಏರಿಕೆ ಮಾಡಲಾಗಿದೆ.

ಈ ನಿರ್ಧಾರದಿಂದ ರಾಜ್ಯದ ಸುಮಾರು 11 ಲಕ್ಷ ಹೈನುಗಾರ ರೈತ ಕುಟುಂಬಗಳಿಗೆ ಅನುಕೂಲವಾಗಲಿದ್ದು, ಅವರ ಆರ್ಥಿಕ ಸಬಲೀಕರಣಕ್ಕೆ ನೆರವಾಗಲಿದೆ ಎಂದು ಹಾಲು ಒಕ್ಕೂಟಗಳ ಪ್ರತಿನಿಧಿಗಳು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಲಕ್ಷ್ಮಣ ಸವದಿ, ಪುಟ್ಟರಂಗಶೆಟ್ಟಿ, ಶಾಸಕರಾದ ಕೆ.ವೈ. ನಂಜೇಗೌಡ, ಸಿ.ಪಿ. ಯೋಗೇಶ್ವರ್, ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಜಿ.ಸಿ. ಚಂದ್ರಶೇಖರ್ ಸೇರಿದಂತೆ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

ಸಿಬಿಎನ್ ಕಾರ್ಯಾಚರಣೆ: ಮಧ್ಯಪ್ರದೇಶದಲ್ಲಿ 595 ಕೆ.ಜಿ. ಗಸಗಸೆ ಪುಡಿ ವಶ; ಇಬ್ಬರ ಬಂಧನ

Next

India Thrash South Korea 8-0 for Fifth Straight Win in Asian Hockey Championship

Recent Posts

  • Bengaluru Skill Summit 2026 Launched to Align Youth Skills With Industry Needs
  • ಯುವಜನರ ಕೌಶಲ್ಯಾಭಿವೃದ್ಧಿಗೆ ಹೊಸ ದಿಕ್ಸೂಚಿ: ಬೆಂಗಳೂರು ಕೌಶಲ್ಯ ಶೃಂಗಸಭೆ–2026ಕ್ಕೆ ಚಾಲನೆ
  • ಉಡುಪಿ ಜಿಲ್ಲೆಯ ಭೂ ಸಂಬಂಧಿತ ಸಮಸ್ಯೆಗಳ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ ಭೇಟಿ
  • ED Attaches Assets Worth ₹510 Crore Linked to Anil Ambani Group in Bank Fraud Probe
  • ED ಯಿಂದ ಅನಿಲ್ ಅಂಬಾನಿ ಸಮೂಹಕ್ಕೆ ಸೇರಿದ ₹510.17 ಕೋಟಿ ಮೌಲ್ಯದ ಆಸ್ತಿ ಜಪ್ತಿ
Copyright 2026 — ANU News. All rights reserved. Blogsy WordPress Theme