Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ಕ್ಷೇತ್ರ ಉಳಿಸಿಕೊಳ್ಳಲು ಕಾರ್ಯತಂತ್ರ; ಸಿಎಂ ಜೊತೆ ಸಚಿವ ರಘುಮೂರ್ತಿ ಸಮಾಲೋಚನೆ

By ANU News
November 12, 2026 1 Min Read
Comments Off on ಹಿರಿಯೂರು ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ಕ್ಷೇತ್ರ ಉಳಿಸಿಕೊಳ್ಳಲು ಕಾರ್ಯತಂತ್ರ; ಸಿಎಂ ಜೊತೆ ಸಚಿವ ರಘುಮೂರ್ತಿ ಸಮಾಲೋಚನೆ

ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಕ್ಷೇತ್ರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಮುಖಂಡರು ಹಾಗೂ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಅವರು ಬುಧವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಭೇಟಿ ನೀಡಿದರು. ದೀಪಾವಳಿ ಶುಭಾಶಯ ಕೋರಿದ ಸಚಿವರು, ಸೋನಿಯಾ ಗಾಂಧಿ ಅವರ ಆತ್ಮಕಥೆಯನ್ನು ಮುಖ್ಯಮಂತ್ರಿಗಳಿಗೆ ಉಡುಗೊರೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಎನ್. ಚಂದ್ರಪ್ಪ ಉಪಸ್ಥಿತರಿದ್ದರು.

ಭೇಟಿಯ ವೇಳೆ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಎನ್‌ಡಿಎ ಅಭ್ಯರ್ಥಿ ಕಣಕ್ಕಿಳಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಪ್ರಕಟವಾಗುವ ನಿರೀಕ್ಷೆಯಿದ್ದು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಹಾಗೂ ಜನಪರ ಕಾರ್ಯಕ್ರಮಗಳನ್ನು ಕ್ಷೇತ್ರದ ಜನರಿಗೆ ತಲುಪಿಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಶಾಸಕ ಡಿ. ಸುಧಾಕರ್ ಅವರ ನಿಧನದಿಂದ ಹಿರಿಯೂರು ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಚುನಾವಣಾ ಆಯೋಗ ಶೀಘ್ರದಲ್ಲೇ ಉಪಚುನಾವಣೆಯ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆಯಿದೆ. ಹೀಗಾಗಿ ಕಾಂಗ್ರೆಸ್ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ.

Author

ANU News

Follow Me
Other Articles
Previous

No New Teams in IPL 2028, BCCI Rules Out Expansion

Next

2027ರಲ್ಲಿ ಮೂರು ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಡಿ.ಕೆ. ಶಿವಕುಮಾರ್ ಘೋಷಣೆ

Recent Posts

  • Bengaluru to Host 27th All India Police Lawn Tennis Championship from November 16
  • JDS Seeks Independent Probe into Corruption Allegations at Hassan DC Office
  • ಹಾಸನ ಡಿಸಿ ಕಚೇರಿಯಲ್ಲಿ ಭ್ರಷ್ಟಾಚಾರ ಆರೋಪ: ಸ್ವತಂತ್ರ ತನಿಖೆಗೆ ಜೆಡಿಎಸ್ ಶಾಸಕರ ಆಗ್ರಹ, CSಗೆ ಮನವಿ
  • Karnataka Moves Supreme Court Over 56% Reservation Quota, Says Parameshwara
  • ಶೇ.56ರಷ್ಟು ಮೀಸಲಾತಿ ವಿಚಾರ; ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವ ಕರ್ನಾಟಕ; ಪರಮೇಶ್ವರ್
Copyright 2026 — ANU News. All rights reserved. Blogsy WordPress Theme